ಆಗಸ್ಟ್ 12 ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲ್ಲಿದ್ದು, ಇದಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪೂರಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಬಹುದಾಗಿದೆ.
ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಸೌಲಭ್ಯ ಸಿಗಲಿದ್ದು, ವಿದ್ಯಾರ್ಥಿಗಳು ತಮ್ಮ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಉಚಿತ ಪ್ರಯಾಣ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.