
ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಸೇನಾ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದ ವೇಳೆ ಕಾರ್ಯಾಚರಣೆ ನಡೆದಿದೆ. ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು ಭಯೋತ್ಪಾದಕರು ಆರ್ಮಿ ಕಂಪನಿ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಹತರಾಗಿದ್ದಾರೆ. ಈ ವೇಳೆ ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.