ಬೆಂಗಳೂರು: ಎಸಿಬಿ ಬದಲು ಲೋಕಾಯುಕ್ತವೇ ಸೂಕ್ತವೆಂದು ಹೈಕೋರ್ಟ್ ಆದೇಶ ನೀಡಿರುವುದು ನನಗೆ ಬಹಳ ಸಂತಸ ತಂದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಎಸಿಬಿ ವಿಚಾರದಲ್ಲಿ ಹೈಕೋರ್ಟ್ ಉತ್ತಮ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಬೇಕು. ಉತ್ತಮ ಅಧಿಕಾರಿಗಳನ್ನು ನೇಮಿಸಬೇಕು. ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಬಾರದು. ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಲೋಕಾಯುಕ್ತ ಸಂಸ್ಥೆಗೆ ಅಧಿಕಾರದ ಜೊತೆಗೆ ಸೌಲಭ್ಯ ಕಲ್ಪಿಸಬೇಕು. ಲೋಕಾಯುಕ್ತರು ಕೊಟ್ಟ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ ಎಂದರು.