alex Certify ರಜತ ಕಮಲ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ‘ಕಾಡು ಕುದುರೆ ಓಡಿ ಬಂದಿತ್ತಾ…’ ಖ್ಯಾತಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಜತ ಕಮಲ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ‘ಕಾಡು ಕುದುರೆ ಓಡಿ ಬಂದಿತ್ತಾ…’ ಖ್ಯಾತಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ರಾತ್ರಿ 11 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಕನ್ನಡ ಸುಗಮ ಸಂಗೀತ ಕ್ಷೇತ್ರದ ಮುಂಚೂಣಿ ಗಾಯಕರಾಗಿದ್ದ ಸುಬ್ಬಣ್ಣ ಅವರ ಹೆಸರು ಜಿ. ಸುಬ್ರಹ್ಮಣ್ಯಂ. 1938 ರಲ್ಲಿ ಶಿವಮೊಗ್ಗದಲ್ಲಿ ಜನಿಸಿದ ಅವರು ವಿದೇಶಗಳಲ್ಲಿಯೂ ಕನ್ನಡದ ಕಂಪು ಹರಿಸಿದ್ದರು. ಆಕಾಶವಾಣಿ ಗಾಯಕರಾಗಿ ಆಯ್ಕೆಯಾಗಿದ್ದ ಅವರು ನಾಟಕಕಾರ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಹಿನ್ನೆಲೆ ಗಾಯಕರಾಗಿ ಪ್ರವೇಶಿಸಿದರು. ಚಂದ್ರಶೇಖರ ಕಂಬಾರರ ‘ಕಾಡು ಕುದುರೆ’ ಚಿತ್ರದ ಹಾಡಿಗಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಅವರಾಗಿದ್ದರು.

‘ಬಾರಿಸು ಕನ್ನಡ ಡಿಂಡಿಮವ’, ‘ಕೋಡಗನ ಕೋಳಿ ನುಂಗಿತ್ತಾ’, ‘ಅಳಬೇಡ ತಂಗಿ ಅಳಬೇಡ’ ಮೊದಲಾದ ಗೀತೆಗಳ ಮೂಲಕ ಅವರು ಮನೆ ಮಾತಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...