
ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಎಸ್.ಯು.ವಿ. ಆಟೋ ರಿಕ್ಷಾ ಮತ್ತು ಮೋಟಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಸೋಜಿತ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಪುನಂಭೈ ಮಾಧಭಾಯಿ ಪರ್ಮಾರ್ ಅವರ ಅಳಿಯ ಖೇತನ್ ಪಾಧಿಯಾರ್ ಅವರು ತಮ್ಮ ಎಸ್.ಯು.ವಿ.ಯನ್ನು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಜಿತ್ರಾ ಗ್ರಾಮದ ಬಳಿ ತಾರಾಪುರದಿಂದ ಆನಂದ್ ಪಟ್ಟಣವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಾರು ಚಾಲಕ ಕುಡಿದ ಮತ್ತಿನಲ್ಲಿದ್ದ.