ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆ ಎನ್ನುವ ವಿಚಾರದಲ್ಲಿ ಸತ್ಯಾಂಶವಿಲ್ಲ. ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಕೇವಲ ಕಾಂಗ್ರೆಸ್ ಪಕ್ಷದ ಸೃಷ್ಟಿಯಾಗಿದೆ. ಕರ್ನಾಟಕ ಕಾಂಗ್ರೆಸ್ ಒಳ ಜಗಳದಿಂದ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಎಂದು ದೂರಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆಯೇ ಜಗಳವಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬೊಮ್ಮಾಯಿಯವರು ಕಾಮನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಬೊಮ್ಮಾಯಿಯವರನ್ನು ಇಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.