ನವದೆಹಲಿ: ಮೆಡಿಕಲ್ ಮತ್ತು ಇಂಜಿನಿಯರಿಂಗ್ ಪದವಿಗೆ ಒಂದೇ ಪ್ರವೇಶ ಪರೀಕ್ಷೆ ನಡೆಸುವ ಬಗ್ಗೆ ಯುಜಿಸಿ ಪರಿಶೀಲನೆ ನಡೆಸುತ್ತಿದೆ.
ಸಿಯುಇಟಿ ಯಲ್ಲಿ ನೀಟ್ ಮತ್ತು ಜೆಇಇ ಮೇನ್ ಪರೀಕ್ಷೆಯಲ್ಲಿ ವಿಲೀನಗೊಳಿಸಲು ಚಿಂತನೆ ನಡೆದಿದೆ. ವೈದ್ಯಕೀಯ ಶಿಕ್ಷಣಕ್ಕೆ ನೀಟ್ ಮತ್ತು ಇಂಜಿನಿಯರಿಂಗ್ ಪ್ರವೇಶಕ್ಕೆ ಜೆಇಇ ಮೇನ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇವುಗಳನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಸಿಯುಇಟಿ ಯಲ್ಲಿ ವಿಲೀನಗೊಳಿಸಲು ಯುಜಿಸಿ ಚಿಂತನೆ ನಡೆಸಿದೆ.
ವಿವಿಧ ಪದವಿ ಕೋರ್ಸ್ ಗಳಿಗೆ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಉದ್ದೇಶವಿದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಒಂದೇ ಪ್ರವೇಶ ಪರೀಕ್ಷೆ ನಡೆಸುವ ಚಿಂತನೆ ಇದೆ ಎಂದು ಹೇಳಲಾಗಿದೆ.