ಬೆಂಗಳೂರು: ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ವತಃ ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಲಾಗಿರುವ ವಿಶೇಷ ಜನ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದರು. ಈ ವೇಳೆ ಮಾತನಾಡಿದ ಸಿಎಂ, ಅಂಗಾಂಗ ದಾನದಿಂದ ನಾವು ಸತ್ತ ಮೇಲೂ ನಾವು 8 ಜನರಿಗೆ ಬದುಕು ಕೊಡಬಹುದು. ಆ ಮೂಲಕ ನಾವು ಸತ್ತ ಮೇಲೂ ಬದುಕಿರುತ್ತೇವೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ಮಾಡಿ, ಜೀವಗಳನ್ನು ಉಳಿಸಿ ಎಂದು ಕರೆ ನೀಡಿದರು.
ನಾನೂ ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿದ್ದೇನೆ. ಮಾನವ ಜನ್ಮ ಶ್ರೇಷ್ಠವಾದದ್ದು, ಅದನ್ನು ಉಳಿಸುವ ಕೆಲಸ ಮಾಡಬೇಕು. ಸಾಧಕನಿಗೆ ಸಾವಿಲ್ಲ, ಸಾವಿನ ನಂತರವೂ ಬದಕಬೇಕು ಎಂದರೆ ಅಂಗಾಂಗ ದಾನ ಮಾಡಿ. ಯುವಜನತೆ ಈ ನಿಟ್ಟಿನಲ್ಲಿ ಹೆಜ್ಜೆಯಿಡಿ ಎಂದು ಹೇಳಿದರು.