ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗ, ಆಯೋಜಿಸಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ “ ಹರ್ ಘರ್ ತಿರಂಗಾ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ನೆರೆದಿದ್ದ ಸಹಸ್ರಾರು ಮಂದಿ ರಾಷ್ಟ್ರ ಧ್ವಜವನ್ನು ಬೀಸುತ್ತಾ ಘೋಷಣೆಗಳನ್ನು ಮೊಳಗಿಸಿದ್ದಾರೆ.