ಭಾರತದಲ್ಲಿ ಇಂದು ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ʼಹರ್ ಘರ್ ತಿರಂಗಾʼ ಅಭಿಯಾನಕ್ಕೂ ಅಭೂತಪೂರ್ವ ಯಶಸ್ಸು ಸಿಕ್ಕಿದ್ದು, ಪ್ರತಿಯೊಂದು ಮನೆ ಮೇಲೂ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ.
ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಕಾಲೇಜು ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಅಶ್ವಥ್ ನಾರಾಯಣ್ ಹಾಜರಿದ್ದರು.
ಧ್ವಜಾರೋಹಣದ ಬಳಿಕ ಗಾಯಕಿ ಮಂಗ್ಲಿ ಮತ್ತು ಗಾಯಕರ ತಂಡದಿಂದ ದೇಶಭಕ್ತಿ ಗೀತೆಗಳನ್ನು ಹಾಡಲಾಗಿದೆ.