ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ನಡಿಗೆ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದ್ದು, ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ.
75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಸ್ವಾತಂತ್ರ್ಯದ ನಡಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾಗಿರುವ ಸ್ವಾತಂತ್ರ್ಯ ನಡಿಗೆ ಸುಮಾರು 7 ಕಿ.ಮೀ ವರೆಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಸಾಗಲಿದೆ.
ಈ ಪಾದಯಾತ್ರೆಯಲ್ಲಿ 16ಕ್ಕೂ ಹೆಚ್ಚು ಜಿಲ್ಲೆಗಳಿಂದ ಲಕ್ಷಾಂತರ ಕೈ ಕಾರ್ಯಕರ್ತರು ಆಗಮಿಸಿದ್ದು, ಪಾದಯಾತ್ರೆಯುದ್ಧಕ್ಕೂ ಸಾಂಸ್ಕೃತಿಕ ಕಲಾತಂಡಗಳು ಕೂಡ ಸಾಗಿವೆ.
ಪಾದಯಾತ್ರೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ರಾಮಲಿಂಗಾರೆಡ್ಡಿ, ಡಾ. ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಸಲಿಂ ಅಹ್ಮದ್, ಜಮೀರ್ ಅಹ್ಮದ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಇನ್ನು ಪಾದಯಾತ್ರೆಯುದ್ಧಕ್ಕೂ ಪೊಲೀಸ್ ಭದ್ರತೆಯೊದಗಿಸಲಾಗಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಂಡವರಿಗಾಗಿ ವಿಶೇಷವಾಗಿ ಕಲ್ಲಂಗಡಿ ಹಣ್ಣು ವಿತರಿಸಲಾಗುತ್ತಿದೆ.