ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ಘರ್ಷಣೆ ಉಂಟಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿಯೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ ನಡೆದಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ನಡುವೆ ಯುವಕರಿಬ್ಬರಿಗೆ ಚಾಕುವಿನಿಂದ ಇರಿಯಲಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಪುಗಳನ್ನು ಚದುರಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.