37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು ಮಂದಿ ಐಟಿಬಿಪಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಬಸ್ ಬ್ರೇಕ್ ಆದ ಕಾರಣ ಈ ಅವಘಡ ಸಂಭವಿಸಿದ್ದು, ಸಿಬ್ಬಂದಿಯನ್ನು ಚಂದನ್ವಾರಿಯಿಂದ ಪೆಹಲ್ಗಾಂವ್ ಗೆ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ಅಪಘಾತದಲ್ಲಿ 30 ಮಂದಿ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಟಿಬಿಪಿ ಮಾಧ್ಯಮ ಪ್ರಕಟಣೆ ತಿಳಿಸಿದೆ.