ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು ಜನಸಾಮಾನ್ಯರು ದೈನಂದಿನ ಜೀವನ ನಡೆಸಲು ಪರದಾಡುತ್ತಿದ್ದಾರೆ. ಇದೀಗ ಅವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ.
ಅಮುಲ್ ತನ್ನ ಹಾಲಿನ ಬೆಲೆಯನ್ನು ಲೀಟರ್ಗೆ ಎರಡು ರೂಪಾಯಿಗಳಷ್ಟು ಹೆಚ್ಚಳ ಮಾಡಿದ್ದು, ಇದು ಇತರೆ ಹಾಲಿನ ಉತ್ಪನ್ನಗಳ ಮೇಲೂ ಪರಿಣಾಮ ಬೀರಲಿದೆ.
ಉತ್ಪಾದನಾ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹಾಲಿನ ಬೆಲೆಯಲ್ಲಿ ಏರಿಕೆ ಮಾಡುವುದು ಅನಿವಾರ್ಯವಾಯಿತು ಎಂದು ಅಮುಲ್ ಆಡಳಿತ ಮಂಡಳಿ ತಿಳಿಸಿದೆ. ಮದರ್ ಡೈರಿ ಕೂಡ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿದೆ.