ಈ ಬಾರಿ ಆಗಸ್ಟ್ 19ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಇದಕ್ಕಾಗಿ ಸಕಲ ರೀತಿಯಲ್ಲಿ ತಯಾರಿ ನಡೆಸಲಾಗಿದೆ.
ಇದರ ಮಧ್ಯೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 19ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಅಂದು ಮಾಂಸ ಮಾರಾಟಗಾರರು ತಮ್ಮ ಉದ್ದಿಮೆ ಬಂದ್ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ತಿಳಿಸಿದ್ದು, ಒಂದೊಮ್ಮೆ ಆದೇಶ ಉಲ್ಲಂಘಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.