ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂಬ ಶಿಕ್ಷಣ ಇಲಾಖೆಯ ಸೂಚನೆ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಲಿದೆಯ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.
ಈ ಹಿಂದೆ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದ ಬಳಿಕ ಕೆಲವರು ಕೋರ್ಟ್ ಮೆಟ್ಟಿಲೇರಿದ್ದು, ಈ ಸಂದರ್ಭದಲ್ಲಿ ಧಾರ್ಮಿಕ ಚಿಹ್ನೆಗಳನ್ನು ಪ್ರತಿಬಿಂಬಸುವ ವಸ್ತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿತ್ತು.
ಇದೀಗ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿರುವುದರಿಂದ ಇದನ್ನು ಯಾರಾದರೂ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಅಥವಾ ಮುಂದಿನ ದಿನಗಳಲ್ಲಿ ಶಾಲೆಗಳಲ್ಲಿ ಪ್ರಾರ್ಥನೆ ಸಲ್ಲಿಸಲು ತಮಗೂ ಅವಕಾಶ ಕೊಡಿ ಎಂದು ಇತರ ಧರ್ಮದವರು ಮನವಿ ಮಾಡಬಹುದು ಎಂಬ ಚರ್ಚೆ ಶಿಕ್ಷಕರ ವಲಯದಲ್ಲೇ ನಡೆದಿದೆ.