ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ.
51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ ಪುತ್ರ ವಿಜಯ್ ಕೊಡಲಿಯಿಂದ ಕೊಚ್ಚಿ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್.ಪಿ. ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.