75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರು ರಾಷ್ಟ್ರಧ್ವಜವನ್ನು ತಮ್ಮ ಮನೆಯ ಮೇಲೆ ಹಾರಿಸಿದ್ದಾರೆ.
ಇದರ ಮಧ್ಯೆ ಚಿಕ್ಕಮಗಳೂರಿನಲ್ಲಿ ಅಹಿತಕರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಮನೆ ಬಳಿ ಕಟ್ಟಿದ್ದ ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟು ತೂತಾಗಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ವಿಚಾರ ಪೊಲೀಸರ ಗಮನಕ್ಕೂ ಬಂದಿದ್ದು, ಬಳಿಕ ಆರೋಪಿ ಅಸ್ಗರ್ ಪರಾರಿಯಾಗಿದ್ದ. ಇದೀಗ ಪೊಲೀಸರು ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆ ನಿವಾಸಿ ಅಸ್ಗರ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.