ನವದೆಹಲಿ: ದೆಹಲಿಯ ಕರ್ನಾಟಕ ಭವನದ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸರ್ಕಾರಿ ನಿವಾಸದ ಕೆಲಸಗಾರರ ಕ್ವಾಟರ್ಸ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಆತ್ಮಹತ್ಯೆಗೆ ಶರಣಾದ ಉದ್ಯೋಗಿ.
ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಅಮಿತ್ ಗುತ್ತಿಗೆ ಆಧಾರದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ತನಿಖೆಯಿಂದಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.