ಕೊಡಗು: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ನಡೆದ ಮೊಟ್ಟೆ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಮಡಿಕೇರಿಯ ಎಸ್ ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಎಸ್ ಪಿ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.