ತುಮಕೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ತರೂರು ಗೇಟ್ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ತೆರಳುತ್ತಿದ್ದ ತಂದೆ, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಅವಿನಾಶ್(28), 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತಪಟ್ಟವರು ಎಂದು ಹೇಳಲಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಸ್ವಿಫ್ಟ್ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.