alex Certify ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲೇ ಸಾವರ್ಕರ್ ಪಾರ್ಕ್ ಉದ್ಘಾಟನೆ; ಹಳೆ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲೇ ಸಾವರ್ಕರ್ ಪಾರ್ಕ್ ಉದ್ಘಾಟನೆ; ಹಳೆ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ರಾಜ್ಯದಲ್ಲಿ ಸಾವರ್ಕರ್ ಕುರಿತ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಜೊತೆಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಲವೆಡೆ ಅಳವಡಿಸಲಾಗಿದ್ದ ಸಾವರ್ಕರ್ ಭಾವಚಿತ್ರವಿದ್ದ ಫ್ಲೆಕ್ಸ್ ತೆರವುಗೊಳಿಸಿದ ಕಾರಣಕ್ಕೆ ಗಲಾಟೆಯೂ ನಡೆದಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಸಾವರ್ಕರ್ ಅವರ ವಿಚಾರವನ್ನು ಪ್ರಸ್ತಾಪಿಸುತ್ತಾ ಬ್ರಿಟಿಷರ ಕ್ಷಮೆ ಕೇಳಿದ್ದ ಸಾವರ್ಕರ್ ಓರ್ವ ಹೇಡಿ ಎಂದು ಹೇಳುತ್ತಿದ್ದಾರೆ.

ಇದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಹೀಗಾಗಿ ಮಡಿಕೇರಿಯಲ್ಲಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಅಲ್ಲದೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಕಪ್ಪು ಬಾವುಟ ಪ್ರದರ್ಶಿಸಲಾಗಿತ್ತು. ಇದರ ಮಧ್ಯೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ಕುತೂಹಲ ಕೆರಳಿಸಿದೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತುಮಕೂರು ನಗರದ ಸೋಮೇಶ್ವರ ಪುರಂ ಬಡಾವಣೆಯ ಉದ್ಯಾನವನಕ್ಕೆ 2016ರ ಸೆಪ್ಟೆಂಬರ್ 6 ರಂದು ಸ್ವಾತಂತ್ರ್ಯ ವೀರ ಶ್ರೀ ವಿನಾಯಕ ದಾಮೋದರ ಸಾವರ್ಕರ್ ಪಾರ್ಕ್ ಎಂದು ನಾಮಕರಣ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಂದು ಗೃಹ ಸಚಿವರಾಗಿದ್ದ ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಟಿ.ಬಿ. ಜಯಚಂದ್ರ, ನಗರಾಭಿವೃದ್ಧಿ ಸಚಿವರಾಗಿದ್ದ ರೋಷನ್ ಬೇಗ್, ಅಂದಿನ ತುಮಕೂರು ನಗರ ಕ್ಷೇತ್ರದ ಶಾಸಕ ರಫೀಕ್ ಅಹ್ಮದ್ ಹಾಗೂ ಆ ವೇಳೆ ಸಂಸದರಾಗಿದ್ದ ಮುದ್ದ ಹನುಮೇಗೌಡ ಪಾಲ್ಗೊಂಡಿದ್ದರು.

ಸಿದ್ದರಾಮಯ್ಯನವರ ಕಾಲದಲ್ಲೇ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ವೀರ ಎಂದು ಒಪ್ಪಿಕೊಂಡಂತಾಗಿದ್ದು, ಇದೀಗ ಅಪಸ್ವರ ಯಾಕೆ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿದೆ. ಈ ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...