ಮಳೆಹಾನಿ ಪ್ರದೇಶಗಳ ಪರಿಶೀಲನೆಗಾಗಿ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ತೆರಳಿದ್ದ ವೇಳೆ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು.
ಇದನ್ನು ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ವಿಭಿನ್ನವಾಗಿ ಪ್ರತಿಭಟಿಸಲಾಗಿದೆ. ವಾರ್ಡ್ ನಂಬರ್ 15 ರಲ್ಲಿ ಪ್ರತಿ ಮನೆಗೂ ಮೊಟ್ಟೆಯನ್ನು ವಿತರಿಸಲಾಗಿದ್ದು, ಒಟ್ಟು 2000 ಮೊಟ್ಟೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದ ಬಡ ಜನತೆಗೆ ಹಾಲು, ಅಕ್ಕಿ, ಮೊಟ್ಟೆ ನೀಡಿದ್ದರು. ಅವರಿಗೆ ಬಿಜೆಪಿ ಸರ್ಕಾರ ಇಂದು ಅವಮಾನ ಮಾಡಿದೆ ಎಂದು ಕಿಡಿಕಾರಿದ್ದಾರೆ.