ಬೆಂಗಳೂರು: ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿ ತಾನು ಕಾಂಗ್ರೆಸ್ ಕಾರ್ಯಕರ್ತ. ಸಿದ್ದರಾಮಯ್ಯ ಹೇಳಿಕೆಯಿಂದ ಕೋಪಗೊಂಡು ಮೊಟ್ಟೆ ಎಸೆದಿದ್ದಾಗಿ ಹೇಳಿರುವ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ರಾಜ್ಯ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ.
ಬಿಜೆಪಿ ಕರ್ನಾಟಕ ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ? ಎಂದು ಕೇಳಿದ್ದಾರೆ.