ರಾಯಚೂರು: ದೇವದುರ್ಗದ ಕೊಪ್ಪರ ರಸ್ತೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಒಂದು ಬೈಕ್, ಒಂದು ಆಟೋ, 2,500 ರು. ನಗದು ವಶಕ್ಕೆ ಪಡೆಯಲಾಗಿದೆ. ಇಬ್ಬರು ಯುವತಿಯರನ್ನು ರಾಯಚೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ದೇವದುರ್ಗ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.