ಇತ್ತೀಚಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆಗಳಲ್ಲಿ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬ್ಲೂಟೂತ್, ವೈಫೈ, ಇಂಟರ್ನೆಟ್ ಇವುಗಳು ಪರೀಕ್ಷಾ ಅಕ್ರಮಕ್ಕೆ ಸಹಕಾರಿಯಾಗುತ್ತಿವೆ.
ಇದೀಗ ಅಸ್ಸಾಂ ಸರ್ಕಾರ, ಹೈಟೆಕ್ ಪರೀಕ್ಷಾ ವಂಚನೆಯನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸುಮಾರು ನಾಲ್ಕು ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.
ಅಸ್ಸಾಂನ 27,000 ವಿವಿಧ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಮೂರು ಹಂತಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಭಾನುವಾರ ನಡೆದ ಮೊದಲ ಹಂತದ ಪರೀಕ್ಷೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಮುಂದಿನ ಹಂತದ ಪರೀಕ್ಷೆಗಳು ಆಗಸ್ಟ್ 28 ಮತ್ತು ಸೆಪ್ಟೆಂಬರ್ 11ಕ್ಕೆ ನಡೆಯಲಿದ್ದು, ಆಗಲೂ ಇದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.