ನವದೆಹಲಿ: ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೈವೀರ್ ಶೆರ್ಗಿಲ್ ಅವರು ರಾಜೀನಾಮೆ ಪತ್ರ ಬರೆದಿದ್ದು, ದೇಶದ ಹಿತಾಸಕ್ತಿಯಿಂದ ಪಕ್ಷ ನಿರ್ಧಾರ ಕೈಗೊಳ್ಳುತ್ತಿಲ್ಲ. ಪಕ್ಷದ ತೀರ್ಮಾನಗಳು ಈಗಿನ ಯುವ ಕಾರ್ಯಕರ್ತರು ಮತ್ತು ಆಧುನಿಕ ಭಾರತದ ಆಕಾಂಕ್ಷೆಗಳೊಂದಿಗೆ ತಾಳೆ ಆಗುತ್ತಿಲ್ಲ ಎಂದು ದೂರಿದ್ದಾರೆ.
ಗಾಂಧಿ ಕುಟುಂಬದ ರಾಹುಲ್ ಗಾಂಧಿ. ಪ್ರಿಯಾಂಕಾ ಗಾಂಧಿ ಹಾಗೂ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಒಂದೂವರೆ ವರ್ಷದಿಂದ ಪ್ರಯತ್ನಿಸುತ್ತಿದ್ದರೂ, ಭೇಟಿಗೆ ಸಮಯ ಕೇಳುತ್ತಿದ್ದರೂ ಅವರು ಭೇಟಿಗೆ ಅವಕಾಶ ನೀಡಿಲ್ಲ. ಇದರಿಂದ ನೋವುಂಟಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಪಕ್ಷಕ್ಕಾಗಿ ಕಳೆದ ಎಂಟು ವರ್ಷಗಳಿಂದ ದುಡಿದಿದ್ದೇನೆ. ಪಕ್ಷದಿಂದ ನಾನು ಏನೂ ಪಡೆದುಕೊಂಡಿಲ್ಲ. ಪಕ್ಷಕ್ಕೆ ಸಾಕಷ್ಟು ಸುರಿದಿದ್ದೇನೆ. ಪಕ್ಷದ ಸ್ವಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದ್ದು, ವಾಸ್ತವತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ನಿರ್ಧಾರಗಳು ವಾಸ್ತವಕ್ಕೆ ಹೊಂದಾಣಿಕೆ ಆಗುತ್ತಿಲ್ಲ. ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡುತ್ತಿದ್ದು. ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.