ವಿವಿಎಸ್ ಲಕ್ಷ್ಮಣ್ ಅವರನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ.
ರಾಹುಲ್ ದ್ರಾವಿಡ್ ಕೋವಿಡ್ ಪಾಸಿಟಿವ್ ಆಗಿರುವುದರಿಂದ ವಿವಿಎಸ್ ಲಕ್ಷ್ಮಣ್ 2022 ರ ಏಷ್ಯಾ ಕಪ್‌ಗೆ ಹಂಗಾಮಿ ಮುಖ್ಯ ಕೋಚ್ ಆಗಲಿದ್ದಾರೆ. ದುಬೈನಲ್ಲಿ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.
ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ತಂಡದೊಂದಿಗೆ ಅವರು ಹೋಗುವುದಿಲ್ಲ ಎಂದು ಖಚಿತವಾಗಿದೆ. ಇದರ ಬೆನ್ನಲ್ಲೇ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ವಿಷಯ ದೃಢಪಡಿಸಿದ್ದಾರೆ, ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ. ಅವರು ಕೋವಿಡ್ ನೆಗೆಟಿವ್ ವರದಿ ಬಂದ ನಂತರ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ಶಾ ತಿಳಿಸಿದ್ದಾರೆ.