ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಇದ್ದುಕೊಂಡು ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ಮಂಗಳವಾರ ಸಂಜೆ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಮೊದಲಿಗೆ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಸಂಜೆ ತಿಂಡಿ ತಿಂದ ಬಳಿಕ ಈ ವಿದ್ಯಾರ್ಥಿನಿಯರ ವರ್ತನೆ ಹಾಸ್ಟೆಲ್ ಸಿಬ್ಬಂದಿಗೆ ಅನುಮಾನ ತರಿಸಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದು ಈ ವೇಳೆ ವೈದ್ಯರ ಬಳಿ ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದರ ಹಿಂದಿನ ಕಾರಣ ತಿಳಿದು ಬಂದಿಲ್ಲ.