ಬೆಂಗಳೂರು; ಚಾಮರಾಜಪೇಟೆ ಈದ್ಗಾ ಮೈದಾನ ಮಾಲಿಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳುವಂತೆ ಸೂಚಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರವಾಗಿ ಇತ್ತೀಚೆಗೆ ಸಾಕಷ್ಟು ವಿವಾದಗಳು ಆರಂಭವಾಗಿತ್ತು. ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ವಕ್ಫ್ ಬೋರ್ಡ್ ನಡುವೆ ಜಟಾಪಟಿ ನಡೆದಿತ್ತು. ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾ.ಹೇಮಂತ್ ಚಂದನ್ ಗೌಡರ್ ಪೀಠ, ಮೈದಾನ ವಿಚಾರವಾಗಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶ ನೀಡಿದೆ.
ಚಾಮರಾಜಪೇಟೆ ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳಬೇಕು. ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಿಕೊಳ್ಳಬಹುದು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದೆ.