ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಆಗಿದ್ದಾಗ ನಾನು ಪರ್ಸೆಂಟ್ ವ್ಯವಹಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹಾಡಿದಂತೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಕುಮಾರಸ್ವಾಮಿ ಏನು ಸತ್ಯಹರಿಶ್ಚಂದ್ರ ಎಂದು ಪ್ರಶ್ನಿಸಿದ ಶ್ರೀರಾಮುಲು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯವನ್ನು ಲೂಟಿ ಮಾಡಿದ್ದಾರೆ. ಅವರ ಭ್ರಷ್ಟಾಚಾರಗಳನ್ನು ಬಿಜೆಪಿ ಸರ್ಕಾರ ಪ್ಯಾಚ್ ಅಪ್ ಮಾಡುತ್ತಿದೆ ಎಂದರು.
ಗುತ್ತಿಗೆದಾರರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ದಾಖಲೆಗಳು ಇದ್ದರೆ ಬಹಿರಂಗಪಡಿಸಲಿ. ವಿನಾಕಾರಣ ಮಂತ್ರಿಗಳು ಮತ್ತು ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಸರ್ಕಾರ ಮತ್ತು ಮುಖ್ಯಮಂತ್ರಿಗೆ ಕೆಟ್ಟ ಹೆಸರು ತರುವ ಪ್ರಯತ್ನ ಇದಾಗಿದ್ದು, ಬೇರೆಯವರು ಹೇಳಿಕೊಟ್ಟಿದ್ದನ್ನು ಗುತ್ತಿಗೆದಾರರು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.