ಬೆಂಗಳೂರು: ರೈತ ವಿಜ್ಞಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಕಾಂಕ್ಷಿಯ ರೈತ ವಿದ್ಯಾನಿಧಿ ಯೋಜನೆ ಕೃಷಿಕಾರ್ಮಿಕರ ಮಕ್ಕಳಿಗೆ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿಜ್ಞಾನಿಧಿ ವಿಸ್ತರಿಸುವುದಾಗಿ ಘೋಷಿಸಿದ್ದರು.
ಸಂಪುಟ ಸಭೆಯ ನಂತರ ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ರೈತ ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.