ನವದೆಹಲಿ: ಬೆಂಗಳೂರು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಚಾಮರಾಜಪೇಟೆ ಈಗ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ಸುಪ್ರೀಂಕೋರ್ಟ್ ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಲ್ಲ
ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಎರಡೂ ಪಕ್ಷಗಳು ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಲ್ಲ. ಹೈಕೋರ್ಟ್ ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶಿಸಲಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ವಿಚಾರಣೆ ನಡೆಸಲಿ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.