ಪುಣೆ: ಕಳೆದ ಮೂರು ತಿಂಗಳಿನಿಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಆರೋಪಿ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ಪುಣೆ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಯುಷ್ ಪ್ರಸಾದ್ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯರು ತಮ್ಮ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ ನಂತರ ಶಿಕ್ಷಕನ ಕೃತ್ಯ ಬೆಳಕಿಗೆ ಬಂದಿದೆ. ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪರಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಿಕ್ಷಕನ ವಿರುದ್ಧ ಐಪಿಸಿಯ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.