ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮನಸ್ವಿನಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಈ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳು, ತಮ್ಮ ಆಧಾರ್ ಸಂಖ್ಯೆಯನ್ನು ಪಿಂಚಣಿ ಆದೇಶಕ್ಕೆ ಲಿಂಕ್ ಮಾಡಿಸಬೇಕಾಗಿದೆ.
ಸೆಪ್ಟೆಂಬರ್ 15 ಇದಕ್ಕೆ ಅಂತಿಮ ದಿನಾಂಕವಾಗಿದ್ದು, ಒಂದು ವೇಳೆ ಈ ಅವಧಿ ಒಳಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.