ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ಆರಂಭವಾಗಲಿದೆ.
ಶ್ರೀಗಳ ವಿರುದ್ಧ ಪೋಸ್ಕೋ ಜೊತೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದ್ದು, ಹೀಗಾಗಿ ಶ್ರೀಗಳಿಗೆ ಜಾಮೀನು ಸಿಗಲಿದೆಯೋ ಇಲ್ಲವೋ ಎಂಬುದು ತಿಳಿಯಲಿದೆ.