ಚಿತ್ರದುರ್ಗ: ಮುರುಘಾ ಶ್ರೀಗಳು ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ 3, 4 ಹಾಗೂ 5ನೇ ಆರೋಪಿಗಳಾದ ಪರಮಶಿವಯ್ಯ, ಗಂಗಾಧರಯ್ಯ ಹಾಗೂ ಮತ್ತೊಬ್ಬ ಅಪ್ರಾಪ್ತ ಆರೋಪಿಯಿಂದ ನಿರೀಕ್ಷಣಾ ಜಾಮೀನಿಗಾಗಿ ಚಿತ್ರದುರ್ಗದ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಮತ್ತೊಂದೆಡೆ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಮಠದ ಹಾಸ್ಟೆಲ್ ನ ವಾರ್ಡನ್ ರಶ್ಮಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.