ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.
ಕೇಸ್ ದಾಖಲಾಗಿ 5 ದಿನ ಕಳೆದರೂ ಪ್ರಕರಣದಲ್ಲಿ ಎ 1 ಆರೋಪಿಯಾಗಿರುವ ಮುರುಘಾ ಶರಣರನ್ನು ಬಂಧಿಸದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇವೆಲ್ಲ ಘಟನೆಗಳ ನಂತರ ರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿದ ಚಿತ್ರದುರ್ಗ ಪೊಲೀಸರು ಮುರುಘಾ ಶರಣರನ್ನು ಬಂಧಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕಳಿಸಲಾಗಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಸ್ವಾಮೀಜಿ ಜೈಲು ಸೇರಿದ್ದಾರೆ.
14 ದಿನಗಳ ಕಾಲ ಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಚಿತ್ರದುರ್ಗದ ಒಂದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ಕೋಮಲಾ ಅವರು ಆದೇಶಿಸಿದ್ದಾರೆ.