ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಒಟ್ಟು 3,783 ಕೋಟಿ ರೂಪಾಯಿ ಮೊತ್ತದ 8 ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ನರೇಂದ್ರ ಮೋದಿಯವರ ಈ ಭೇಟಿಯ ಹಿಂದೆ ವಿಶೇಷತೆಯೊಂದಿದ್ದು, ಪ್ರಧಾನಿಯೊಬ್ಬರು ನಾಲ್ಕೂವರೆ ದಶಕಗಳ ಬಳಿಕ ‘ಅಧಿಕೃತ’ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಎಂಬ ಹೆಗ್ಗಳಿಕೆ ಈ ಕಾರ್ಯಕ್ರಮಕ್ಕೆ ಇದೆ.
1975ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಎನ್ ಎಂ ಪಿ ಟಿ ಉದ್ಘಾಟನೆಗೆ ಆಗಮಿಸಿದ್ದು, ಆ ಬಳಿಕ ನರೇಂದ್ರ ಮೋದಿಯವರು ದಕ್ಷಿಣ ಕನ್ನಡಕ್ಕೆ ಹಲವು ಬಾರಿ ಆಗಮಿಸಿದ್ದರಾದರೂ ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು.