ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ರಾತ್ರಿಯಿಡಿ ಶ್ರಿಗಳು ನಿದ್ದೆ ಮಾಡಿಲ್ಲ. ಒತ್ತಡಕ್ಕೆ ಒಳಗಾಗಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಮಗೆ ಎದೆನೋವು ಕಾಣಿಸಿಕೊಂಡ ಬಗ್ಗೆ ಸ್ವಾಮೀಜಿ ಜೈಲಿನ ಸಿಬ್ಬಂದಿಗೆ ತಿಳಿಸಿದ್ದು, ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲಿನಿಂದ ಜಿಲ್ಲಾಸ್ಪತ್ರೆಗೆ ಅವರನ್ನು ಸ್ಥಳಾಂತರ ಮಾಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂವರು ವೈದ್ಯರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದೆ.
ವೈದ್ಯರಾದ ಡಾ. ಶಿವಕುಮಾರ್, ರೂಪಾ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಹೈಬಿಪಿ, ಎದೆನೋವು ಇರುವುದು ಗೊತ್ತಾಗಿದೆ. ಆರೋಗ್ಯ ತೊಂದರೆ ಹಿನ್ನೆಲೆಯಲ್ಲಿ ಶ್ರೀಗಳನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು ಎಂದು ಹೇಳಲಾಗಿದೆ.