ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗ ಜೈಲಿನ ವಿಚಾರಣಾ ಕೈದಿ ಸಂಖ್ಯೆ 2261 ನೀಡಲಾಗಿದೆ.
ಗುರುವಾರ ರಾತ್ರಿ ಶ್ರೀಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿದ್ದು, ಜೈಲಿನಲ್ಲಿ ರಾತ್ರಿಯಿಡಿ ವಿಚಾರಣಾ ದಿನ ಕೈದಿಯಾಗಿ ಕಾಲ ಕಳೆದ ಅವರು ಎದೆನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪೊಲೀಸ್ ಕಸ್ಟಡಿಗೆ ನೀಡಿದ್ದು, ವಿಚಾರಣೆ ಮುಂದುವರಿಸಲಾಗಿದೆ. ಶಿವಮೂರ್ತಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ.