ಚಿತ್ರದುರ್ಗ: ಇಂದು ಜಾಮೀನು ಕೋರಿ ಮುರುಘಾ ಶ್ರೀಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ, ಚಿತ್ರದುರ್ಗದಲ್ಲಿ ಮಠದ ಪರ ವಕೀಲ ಉಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಇಂದು ಕೂಡ ಶ್ರೀಗಳ ವಿಚಾರಣೆ ಮುಂದುವರೆಯಲಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ. ಇಂದು ಚಿತ್ರದುರ್ಗ ಡಿ.ವೈ.ಎಸ್.ಪಿ. ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ. ಡಿವೈಎಸ್ಪಿ ಅನಿಲ್ ನೇತೃತ್ವದಲ್ಲಿ ಸ್ವಾಮೀಜಿ ವಿಚಾರಣೆ ನಡೆಯಲಿದೆ. ಡಿವೈಎಸ್ಪಿ ಕಚೇರಿಗೆ ಬಿಗಿ ಭದ್ರತೆ ಒದಗಿಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಸದ್ಯ ಮುರುಘಾ ಶರಣರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ನಿನ್ನೆಯೂ ಎರಡು ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇಂದು ವಿಚಾರಣೆ ಮುಂದುವರೆಯಲಿದೆ.
ಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ಬಂಧಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅವರನ್ನು ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.