ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭ್ರಷ್ಟಾಚಾರದ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸ್ವತಃ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆಯಲಾಗಿತ್ತು.
ಇದರ ಮಧ್ಯೆ ಖಾಸಗಿ ಶಾಲಾ ಸಂಘಟನೆ ರುಪ್ಸಾ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯಲ್ಲೂ ಸಹ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ಕುರಿತು ಅನುಮಾನ ಮೂಡುವಂತೆ ಆಗಿತ್ತು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಅವರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಗುಡುಗಿದ್ದರು.
ಭ್ರಷ್ಟಾಚಾರದ ಕುರಿತಂತೆ ರುಪ್ಸಾ ಹೇಳಿಕೆ ಬಳಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್. ವಿಶಾಲ್, ಸೂಕ್ತ ಸಾಕ್ಷ್ಯಾಧಾರ ನೀಡುವಂತೆ ನಿರ್ದೇಶನ ನೀಡಿದ್ದರು. ಇದೀಗ ಖಾಸಗಿ ಶಾಲಾ ಸಂಘಟನೆ ರುಪ್ಸಾ ಪದಾಧಿಕಾರಿಗಳು ಉಲ್ಟಾ ಹೊಡೆದಿದ್ದು, ನಾವು ಸಚಿವರ ವಿರುದ್ಧ ಆರೋಪ ಮಾಡಿಲ್ಲ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದು ಲಿಖಿತ ಹೇಳಿಕೆ ನೀಡಿದ್ದಾರೆ.