ಪೋಷಣ್ 2.0 ಯೋಜನೆಯಡಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಅಂಗನವಾಡಿಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರದಂದು ಆದೇಶ ಹೊರಡಿಸಿದೆ.
ಒಟ್ಟು 4,244 ಅಂಗನವಾಡಿಗಳನ್ನು ಆರಂಭಿಸಲಾಗುತ್ತಿದ್ದು, ಕಡಿಮೆ ಆದಾಯದ ಜನರು ಹಾಗೂ ವಲಸೆ ಮತ್ತು ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಈ ಅಂಗನವಾಡಿಗಳು ಕಾರ್ಯನಿರ್ವಹಿಸಲಿವೆ.
ನಗರ ಪ್ರದೇಶಗಳಲ್ಲಿ 2,589 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1,655 ಅಂಗನವಾಡಿಗಳು ಆರಂಭವಾಗುತ್ತಿದ್ದು, ಇದಕ್ಕಾಗಿ 268.98 ಕೋಟಿ ರೂ. ವೆಚ್ಚದ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ. ಈ ಅಂಗನವಾಡಿಗಳಿಂದ 8,100 ಮಹಿಳೆಯರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.