ಬೆಂಗಳೂರು: ಬೆಂಗಳೂರಿನ ರಾಯಲ್ ಆರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ ನಲ್ಲಿ ನಸುಕಿನ ಜಾವ 3 ಗಂಟೆಯವರೆಗೂ ಪಾರ್ಟಿ ನಡೆಯುತ್ತಿತ್ತು. ಈ ಹಿನ್ನಲೆಯಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ.
ಎಸಿಪಿ ರೀನಾ, ಇನ್ಸ್ಪೆಕ್ಟರ್ ಗೋವಿಂದರಾಜು ತಂಡದಿಂದ ದಾಳಿ ನಡೆಸಲಾಗಿದ್ದು, ಪಾರ್ಟಿಯಲ್ಲಿದ್ದ 100 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ದಾಳಿಯ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು ಮತ್ತು ಮದ್ಯ ಜಪ್ತಿ ಮಾಡಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.