ರಾಮನಗರ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಘಟನೆ ನಡೆದಿದ್ದು, ರೈತ ಮುಖಂಡ ಲೋಕೇಶ್ ಪತ್ನಿ ರೂಪಾ(38), ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ(4) ಮೃತಪಟ್ಟವರು ಎಂದು ಹೇಳಲಾಗಿದೆ. ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.