ಚಾಮರಾಜನಗರ: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆಗೆ ಮನೆ ಗೋಡೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಇಲ್ಲಿನ ದಡದಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, 33 ವರ್ಷದ ಮೂರ್ತಿ ಮೃತ ದುರ್ದೈವಿ. ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಮನೆಯ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿ ಯುವಕ ಸಾವನ್ನಪ್ಪಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಯುವಕನ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ.