ಯಾದಗಿರಿ: ಯಾದಗಿರಿ ಜಿಲ್ಲೆ ಕಡೇಚೂರು ಬಳಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಪತಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದ ಸಿದ್ದಪ್ಪ(25) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ನಾಗರಾಜ್ ಕೊಲೆ ಆರೋಪಿಯಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈತನ ಪತ್ನಿ ಯೊಂದಿಗೆ ಸಿದ್ದಪ್ಪ ಕಳೆದ ಎರಡು ವರ್ಷಗಳಿಂದ ಅಕ್ರಮ ಸಂಬಂಧ ಬೆಳೆಸಿದ್ದ. ಈ ವಿಚಾರ ತಿಳಿದು ನಾಗರಾಜ್ ಬಡಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.