ನವದೆಹಲಿ: ದೆಹಲಿ, ಮುಂಬೈ, ಲಕ್ನೋ ಸೇರಿದಂತೆ 6 ರಾಜ್ಯಗಳ 30 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿ ಅಬಕಾರಿ ನೀತಿ ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ದೆಹಲಿ, ಮುಂಬೈ, ಗುರುಗ್ರಾಮ್, ಲಕ್ನೋ ಸೇರಿದಂತೆ 30 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.