ಟೀಮ್ ಇಂಡಿಯಾ ಆಟಗಾರ ಸುರೇಶ್ ರೈನಾ ಐಪಿಎಲ್ ಸೇರಿದಂತೆ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಕ್ರಿಕೆಟ್ ನಲ್ಲಿ ನನ್ನ ದೇಶ ಹಾಗೂ ರಾಜ್ಯವನ್ನು ಪ್ರತಿನಿಧಿಸಿದ್ದಕ್ಕೆ ನನಗೆ ಹೆಮ್ಮೆಯಿದೆ ಎಂದಿದ್ದಾರೆ.
ಹಾಗೆಯೇ ತಮಗೆ ಅವಕಾಶ ಮಾಡಿಕೊಟ್ಟ ಬಿಸಿಸಿಐ, ಐಪಿಎಲ್ ನಲ್ಲಿ ತಾವು ಪ್ರತಿನಿಧಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸುರೇಶ್ ರೈನಾ ಸ್ಮರಿಸಿಕೊಂಡಿದ್ದಾರೆ.